ಮಧ್ಯ ಪೆರುವಿನಲ್ಲಿ 6.9 ತೀವ್ರತೆಯ ಭೂಕಂಪನ.ಜೂನಿನ್ ನಗರದ ಉತ್ತರಕ್ಕೆ 34 ಕಿ.ಮೀ ದೂರದಲ್ಲಿ ಹಾಗೂ ಭೂಮಿಯ 108 ಕಿ.ಮೀ ಆಳದಲ್ಲಿ ಭೂಕಂಪನದ ಕೇಂದ್ರಬಿಂದು.ರಾಜಧಾನಿ ಲಿಮಾದಲ್ಲೂ ಭೂಮಿ ಕಂಪಿಸಿದ ಅನು. ಭಾರತೀಯ ಕಾಲಮಾನದ ಪ್ರಕಾರ ಶನಿವಾರ ಬೆಳಿಗ್ಗೆ ಭೂಕಂಪ ಸಂಭವಿಸಿವೆ. ಭೂಕಂಪದ ಪ್ರಭಾವ ರಾಜಧಾನಿ ಲಿಮಾವರೆಗೂ ಕಂಡುಬಂದಿದ್ದರಿಂದ ಜನರು ಭಯಭೀತರಾಗಿ ಮನೆಗಳಿಂದ ಹೊರಕ್ಕೆ ಓಡಿ ಬಂದಿರುವ ದೃಶ್ಯಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಭೂಕಂಪನದಿಂದಾಗಿ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ನಷ್ಟ ಸಂಭವಿಸಿರುವ ಬಗ್ಗೆ ತಕ್ಷಣಕ್ಕೆ ವರದಿಯಾಗಿಲ್ಲ..ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ (USGS) ನೀಡಿರುವ ಮಾಹಿತಿಯ ಪ್ರಕಾರ, ಸ್ಥಳೀಯ ಕಾಲಮಾನ ಶುಕ್ರವಾರ ಸಂಜೆ 7:09ಕ್ಕೆ ಭಾರತೀಯ ಕಾಲಮಾನದ ಪ್ರಕಾರ ಶನಿವಾರ ಬೆಳಿಗ್ಗೆ ಭೂಮಿ ಕಂಪಿಸಿದೆ.