ಖಲಿಸ್ತಾನಿ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆಗೆ ಸುಪಾರಿ ನೀಡುವ ಸಂಚಿನಲ್ಲಿ ಭಾಗಿಯಾಗಿದ್ದ ಭಾರತೀಯ ಪ್ರಜೆ ನಿಖಿಲ್ ಗುಪ್ತಾಗೆ ಅಮೆರಿಕದ ನ್ಯಾಯಾಲಯ 235 ತಿಂಗಳು ಅಂದರೆ ಸುಮಾರು 19 ವರ್ಷ ಏಳು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಈ ಪ್ರಕರಣದಲ್ಲಿ ಅವರು ಮೂರು ಆರೋಪಗಳನ್ನು ಒಪ್ಪಿಕೊಂಡಿದ್ದರು. ನ್ಯೂಯಾರ್ಕ್: ಖಲಿಸ್ತಾನಿ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆಗೆ ( Gurpatwant Singh Pannun) ಸುಪಾರಿ ನೀಡುವ ಸಂಚಿನಲ್ಲಿ ಭಾಗಿಯಾಗಿದ್ದ ಭಾರತೀಯ ಪ್ರಜೆ ನಿಖಿಲ್ ಗುಪ್ತಾಗೆ (Nikhil Gupta) ಅಮೆರಿಕದ ನ್ಯಾಯಾಲಯ 19 ವರ್ಷಕ್ಕೂ ಹೆಚ್ಚು ಕಾಲ ಜೈಲು ಶಿಕ್ಷೆ ವಿಧಿಸಿದೆ.