ಕೆಪಿಎಸ್ಸಿ ನೇಮಕಾತಿ ಹಗರಣದ ಇಡಿ ಚಾರ್ಜ್ಶೀಟ್ನಲ್ಲಿ ಬೆಂಗಳೂರು ಗ್ರಾಮಾಂತರ ಎಸ್ಪಿ ಚಂದ್ರಕಾಂತ್ ಹೆಸರು ಉಲ್ಲೇಖವಾಗಿರುವುದು ತಿಳಿದುಬಂದಿದೆ. ಇಬ್ಬರು ಪುತ್ರಿಯರಿಗೆ ಕೆಎಎಸ್ ಹುದ್ದೆ ಕೊಡಿಸಲು ಎರಡು ಕೋಟಿ ರೂಪಾಯಿ ನೀಡಿದ್ದರು ಎಂದು ಆರೋಪಿ ಬಸವರಾಜ್ ಕನ್ನಾಳೆ ಜಾರಿ ನಿರ್ದೇಶನಾಲಯ ತನಿಖೆ ವೇಳೆ ಹೇಳಿಕೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರು, ನವೆಂಬರ್ 21: ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಹಗರಣದ ತನಿಖೆಯಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆಯಾಗಿದೆ. ಜಾರಿ ನಿರ್ದೇಶನಾಲಯ (ED) ಸಲ್ಲಿಸಿರುವ ಚಾರ್ಜ್ಶೀಟ್ನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಚಂದ್ರಕಾಂತ್ ಅವರ ಹೆಸರು ಉಲ್ಲೇಖವಾಗಿದೆ.