ಮದುವೆ ವಿಚಾರಕ್ಕೆ ಬೆಂಗಳೂರಿನ ಪುಟ್ಟೇನಹಳ್ಳಿ ವಿನಾಯಕ ನಗರದಲ್ಲಿ ಎರಡು ಕುಟುಂಬಗಳ ನಡುವೆ ಭಾರಿ ಜಗಳ ನಡೆದಿದೆ. ಈ ವೇಳೆ ಯುವಕನೊಬ್ಬ ಪಿಸ್ತೂಲ್ ಪ್ರದರ್ಶಿಸಿ ಹುಡುಗಿ ಮನೆಯವರಿಗೆ ಬೆದರಿಕೆ ಹಾಕಿದ್ದಾನೆ. ಸಂಬಂಧಿಕರು ಪಿಸ್ತೂಲ್ ಕಸಿದುಕೊಳ್ಳುತ್ತಿದ್ದಂತೆಯೇ ಯುವಕ ಸ್ನೇಹಿತರೊಂದಿಗೆ ಪರಾರಿಯಾಗಿದ್ದಾನೆ. ಪುಟ್ಟೇನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ. ಬೆಂಗಳೂರು, ನವೆಂಬರ್ 21: ಮದುವೆ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಜಗಳದಲ್ಲಿ ಯುವಕನೊಬ್ಬ ಪಿಸ್ತೂಲ್ ಪ್ರದರ್ಶಿಸಿ ಬೆದರಿಕೆ ಹಾಕಿದ ಘಟನೆ ಬೆಂಗಳೂರಿನ ಪುಟ್ಟೇನಹಳ್ಳಿಯ ವಿನಾಯಕ ನಗರದಲ್ಲಿ ನಡೆದಿದೆ. ಎರಡು ಕುಟುಂಬಗಳ ನಡುವೆ ಭಾರಿ ಜಗಳ ನಡೆದಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ.