ವಿದೇಶಿ ಪಿಚ್ಗಳ ಸವಾಲನ್ನು ಮೆಟ್ಟಿ ನಿಲ್ಲುವುದರಲ್ಲಿ ತಾನು ಎತ್ತಿದ ಕೈ ಎಂಬುದನ್ನು ಕನ್ನಡಿಗ ಕೆ.ಎಲ್. ರಾಹುಲ್ ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಈ ಬಾರಿ ನ್ಯೂಝಿಲೆಂಡ್ನಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಎಂಬುದಷ್ಟೇ ವ್ಯತ್ಯಾಸ. ಈ ಶತಕದೊಂದಿಗೆ ಎಲ್ಲಾ ನಾಲ್ಕು SENA ದೇಶಗಳಲ್ಲಿ ಆರಂಭಿಕನಾಗಿ 100+ ರನ್ ಗಳಿಸಿದ ಏಕೈಕ ಭಾರತೀಯ ಬ್ಯಾಟರ್ ಎಂಬ ದಾಖಲೆ ನಿರ್ಮಿಸಿದ್ದಾರೆ. ಭಾರತೀಯ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಯಾರಿಂದಲೂ ಸಾಧ್ಯವಾಗದ ವಿಶೇಷ ದಾಖಲೆಯೊಂದನ್ನು ಕೆಎಲ್ ರಾಹುಲ್ ನಿರ್ಮಿಸಿದ್ದಾರೆ. ಅದು ಸಹ ಎಲ್ಲಾ SENA (ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್ ಮತ್ತು ಆಸ್ಟ್ರೇಲಿಯಾ) ದೇಶಗಳಲ್ಲಿ ಆರಂಭಿಕನಾಗಿ ಕಣಕ್ಕಿಳಿದು ಟೆಸ್ಟ್ ಶತಕ ಬಾರಿಸುವ ಮೂಲಕ ಎಂಬುದು ವಿಶೇಷ.