2000 ಕೋಟಿ ಬಜೆಟ್ನ ‘ರಾಮಾಯಣ’ ಸಿನಿಮಾ 1500 ಕೋಟಿ ಗಳಿಸಿರುವ ಬೆನ್ನಲ್ಲೇ ‘ಹನುಮಾನ್ ಅಂಶ್’ ನಿರ್ದೇಶಕ ವಿಶಾಲ್ ಚತುರ್ವೇದಿ ಸಿನಿಮಾ ಬಜೆಟ್ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ. ಹೂಡಿಕೆಗೆ ತಕ್ಕ ಪ್ರತಿಫಲ ಬರದಿದ್ದರೆ ಸಿನಿಮಾ ಫ್ಲಾಪ್ ಎನಿಸಿಕೊಳ್ಳುತ್ತದೆ ಎನ್ನುವ ಮೂಲಕ ದೊಡ್ಡ ಬಜೆಟ್ ಚಿತ್ರಗಳಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ. ನಿತೇಶ್ ತಿವಾರಿ ನಿರ್ದೇಶನದ, ಯಶ್ ಮತ್ತು ರಣಬೀರ್ ಕಪೂರ್ ನಟನೆಯ ಬಹುನಿರೀಕ್ಷಿತ ‘ರಾಮಾಯಣ: ಭಾಗ 1’ ಸಿನಿಮಾದ ಬಜೆಟ್ ಮತ್ತು ಗಳಿಕೆಯ ಬಗ್ಗೆ ಈಗ ಚರ್ಚೆ ಶುರುವಾಗಿದೆ. ಸುಮಾರು 2000 ಕೋಟಿ ರೂಪಾಯಿ ಬಜೆಟ್ನಲ್ಲಿ ತಯಾರಾದ ಈ ಚಿತ್ರ ಬಾಕ್ಸ್ ಆಫೀಸ್ನಲ್ಲಿ 1500 ಕೋಟಿ ರೂಪಾಯಿಗೂ ಹೆಚ್ಚು ಗಳಿಸಿದೆ.