ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಶಕ್ತಿ' ಯೋಜನೆ (ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ)ದಿಂದಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಈ ತಿಂಗಳು ತನ್ನ ಸಿಬ್ಬಂದಿಗೆ ವೇತನ ಪಾವತಿಸಲು ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಇದರ ನಡುವೆಯೇ 2023ರಿಂದ 1,000ಕ್ಕೂ ಹೆಚ್ಚು ಸಿಬ್ಬಂದಿಯ ಗ್ರಾಚ್ಯುಟಿ ಪಾವತಿ ಬಾಕಿ ಉಳಿದಿದೆ ಎಂದು ನೌಕರರ ಸಂಘ ಆರೋಪಿಸಿದೆ.ಬಿಎಂಟಿಸಿಗೆ ರೂ.650 ಕೋಟಿ ಡೀಸೆಲ್ ಬಾಕಿ ಪಾವತಿಸಬೇಕಿದ್ದು, ಸಿಬ್ಬಂದಿಯ ವಿಮೆ ಹಾಗೂ ಭವಿಷ್ಯ ನಿಧಿಗೆ ಮೀಸಲಿಟ್ಟ ಹಣವನ್ನೂ ಬೇರೆ ಉದ್ದೇಶಗಳಿಗೆ ಬಳಸಲಾಗಿದೆ ಎಂದು ಕೆಎಸ್ಆರ್ಟಿಸಿ ನೌಕರರ ಸಂಘದ ಅಧ್ಯಕ್ಷ ಜಗದೀಶ್ ಎಚ್.ಆರ್.