ಬೆಂಗಳೂರಿನ ನೂತನ ಮುಖ್ಯ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಆರ್. ಹಿತೇಂದ್ರ, ಟಿವಿ9 ಜೊತೆ ವಿಶೇಷ ಸಂದರ್ಶನ ನೀಡಿದ್ದಾರೆ. ನಗರದ ಮೊದಲ ಮುಖ್ಯ ಆಯುಕ್ತರಾಗಿ ಕಾರ್ಯಭಾರ ವಹಿಸಿಕೊಂಡ ಹಿನ್ನೆಲೆಯಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ. ಆದರೆ, ಜನರ ನಿರೀಕ್ಷೆಗಳು ಮತ್ತು ಮುಂಬರುವ ಸವಾಲುಗಳ ಬಗ್ಗೆಯೂ ಮಾತನಾಡಿದ್ದಾರೆ. ಪೊಲೀಸ್ ಠಾಣೆಗಳಲ್ಲಿ ಇನ್ನು ಯಾವುದೇ ಇತ್ಯರ್ಥವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರು, ನವೆಂಬರ್ 21: ಬೆಂಗಳೂರು ನಗರಕ್ಕೆ ಹೊಸ ಮುಖ್ಯ ಆಯುಕ್ತರಾಗಿ ನೇಮಕಗೊಂಡಿರುವ ಆರ್. ಹಿತೇಂದ್ರ ಅವರು ಟಿವಿ9 ಕನ್ನಡದೊಂದಿಗೆ ವಿಶೇಷ ಸಂದರ್ಶನ ನೀಡಿದ್ದಾರೆ. ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಮಾಧ್ಯಮಗಳ ಮುಂದೆ ಬಂದ ಅವರು, ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದಾರೆ.