RRC ಮುಂಬೈ ಕೇಂದ್ರ ರೈಲ್ವೆಯಲ್ಲಿ 2861 ಆಕ್ಟ್ ಅಪ್ರೆಂಟಿಸ್ ಹುದ್ದೆಗಳಿಗೆ ಅಧಿಸೂಚನೆ ಪ್ರಕಟವಾಗಿದೆ. ITI ಉತ್ತೀರ್ಣರಾದ ಅಭ್ಯರ್ಥಿಗಳು ವಿವಿಧ ಟ್ರೇಡ್ಗಳಲ್ಲಿ ಅರ್ಜಿ ಸಲ್ಲಿಸಬಹುದು. 10ನೇ ತರಗತಿ ಮತ್ತು ITI ಅಂಕಗಳ ಆಧಾರದ ಮೇಲೆ ಆಯ್ಕೆ ನಡೆಯಲಿದ್ದು, ಆನ್ಲೈನ್ ಅರ್ಜಿ ಸಲ್ಲಿಸಲು ಡಿಸೆಂಬರ್ 2 ಕೊನೆಯ ದಿನಾಂಕ. ಮಾಸಿಕ 9,600 ರೂ. ಸ್ಟೈಫಂಡ್ ಲಭ್ಯ. ಆಸಕ್ತರು ತಡಮಾಡದೇ ಕೂಡಲೇ ಅರ್ಜಿ ಸಲ್ಲಿಸಿ. ರೈಲ್ವೆ ನೇಮಕಾತಿ ಕೋಶ (RRC), ಮುಂಬೈ, ಕೇಂದ್ರ ರೈಲ್ವೆಯ ಅಡಿಯಲ್ಲಿ ಬರುವ ವಿವಿಧ ಕಾರ್ಯಾಗಾರಗಳು ಮತ್ತು ಘಟಕಗಳಲ್ಲಿ ಆಕ್ಟ್ ಅಪ್ರೆಂಟಿಸ್ (Act Apprentice) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ.