ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿ 90ನೇ ವಯಸ್ಸಿನಲ್ಲಿ ನಿಧನರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸಾವಿತ್ರಿ ದೇವಿ ಅವರ ಪಾರ್ಥಿವ ಶರೀರಕ್ಕೆ ಉತ್ತರಾಖಂಡದ ತಮ್ಮ ಪೂರ್ವಜರ ಗ್ರಾಮದಲ್ಲಿ ಯೋಗಿ ಆದಿತ್ಯನಾಥ್ ಸ್ವತಃ ಹೆಗಲು ಕೊಟ್ಟರು. ಈ ಅಂತಿಮ ವಿದಾಯದಲ್ಲಿ ಹಲವು ನಾಯಕರು ಉಪಸ್ಥಿತರಿದ್ದರು. ಉತ್ತರ ಪ್ರದೇಶ, ನ.21: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿ (90) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ತಮ್ಮ 90ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಈ ಕುರಿತು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಮಾತೃವಿಯೋಗ ಉಂಟಾಗಿದೆ.