ಟೀಮ್ ಇಂಡಿಯಾ ಡ್ರೆಸ್ಸಿಂಗ್ ರೂಮ್ ಮಾಹಿತಿ ಸೋರಿಕೆ ವದಂತಿ ಮತ್ತು ಇದರಿಂದ ಉಂಟಾದ ನೋವಿನ ಕುರಿತು ಬ್ಯಾಟರ್ ಸರ್ಫರಾಝ್ ಖಾನ್ ಸ್ಪಷ್ಟನೆ ನೀಡಿದ್ದು, ಸಂಕಷ್ಟದ ಸಮಯದಲ್ಲಿ ಟೀಮ್ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್ ಕರೆ ಮಾಡಿ ತನಗೆ ಧೈರ್ಯ ತುಂಬಿದ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಟೀಮ್ ಇಂಡಿಯಾದ ಯುವ ಬ್ಯಾಟರ್ ಸರ್ಫರಾಝ್ ಖಾನ್ ಅವರು 2024–25ರ ಆಸ್ಟ್ರೇಲಿಯಾ ಪ್ರವಾಸದ (ಬಾರ್ಡರ್-ಗವಾಸ್ಕರ್ ಟ್ರೋಫಿ) ವೇಳೆ ಭಾರತೀಯ ಡ್ರೆಸ್ಸಿಂಗ್ ರೂಂನ ಆಂತರಿಕ ಮಾಹಿತಿಯನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದ್ದಾರೆ ಎಂಬ ಗಂಭೀರ ವದಂತಿಗಳ ಬಗ್ಗೆ ಕೊನೆಗೂ ಮೌನ ಮುರಿದಿದ್ದಾರೆ.