ನ್ಯೂಝಿಲೆಂಡ್ ನೆಲದಲ್ಲಿ ಟೀಮ್ ಇಂಡಿಯಾದ ಆರಂಭಿಕ ಬ್ಯಾಟರ್ ಕೆ.ಎಲ್. ರಾಹುಲ್ ಐತಿಹಾಸಿಕ ಶತಕ ಸಿಡಿಸಿ ಮಿಂಚಿದ್ದಾರೆ. ಮೊದಲ ಟೆಸ್ಟ್ ಪಂದ್ಯದ ಮೂರನೇ ದಿನದಾಟದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದ ರಾಹುಲ್ (136 ರನ್), ಭಾರತೀಯ ಕ್ರಿಕೆಟ್ನ 50 ವರ್ಷಗಳ ಹಳೆಯ ಅಪರೂಪದ ದಾಖಲೆಯೊಂದನ್ನು ಸರಿಗಟ್ಟುವ ಮೂಲಕ ಕಿವೀಸ್ ನಾಡಿನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ಆರಂಭಿಕ ಬ್ಯಾಟರ್ ಕೆ.ಎಲ್. ರಾಹುಲ್ ಭರ್ಜರಿ ಶತಕ ಸಿಡಿಸುವ ಮೂಲಕ 50 ವರ್ಷಗಳ ಹಳೆಯ ಅಪರೂಪದ ದಾಖಲೆಯೊಂದನ್ನು ಸರಿಗಟ್ಟಿದ್ದಾರೆ.