ಲಖನೌ: ಉತ್ತರ ಪ್ರದೇಶದ ಸಹರಾನ್ಪುರದ ಸರ್ಕ್ಯೂಟ್ ಹೌಸ್ನಲ್ಲಿ ಶನಿವಾರ(ನ. 21) ಸುಪ್ರೀಂಕೋರ್ಟ್ ನ್ಯಾಯಾಧೀಶರನ್ನು ಸ್ವಾಗತಿಸಲು ಸಿದ್ಧತೆ ನಡೆಸುತ್ತಿದ್ದಾಗ ಪೊಲೀಸ್ ಸಿಬ್ಬಂದಿ ತಪ್ಪಾಗಿ ಎಐಎಂಐಎ. ಪೊಲೀಸ್ ಸಿಬ್ಬಂದಿ ತಮಗೆ ಸೆಲ್ಯೂಟ್ ನೀಡುತ್ತಿರುವುದನ್ನು ನೋಡಿದ ಓವೈಸಿ ಅಲ್ಲಿಯೇ ನಿಂತು ಸೆಲ್ಯೂಟ್ ಸ್ವೀಕರಿಸಿದ್ದಾರೆ. ಆದರೆ, ಈ ಗೌರವ ವಂದನೆ ವಾಸ್ತವವಾಗಿ ಸರ್ಕ್ಯೂಟ್ ಹೌಸ್ಗೆ ಭೇಟಿ ನೀಡಬೇಕಿದ್ದ ಸುಪ್ರೀಂಕೋರ್ಟ್ ನ್ಯಾಯಾಧೀಶರಿಗೆ ನೀಡಲು ಉದ್ದೇಶಿಸಲಾಗಿತ್ತು ಎನ್ನಲಾಗಿದೆ.ಆಜಾದ್ ಸಮಾಜ ಪಕ್ಷದ ಮುಖ್ಯಸ್ಥ ಚಂದ್ರಶೇಖರ್ ಶನಿವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಸರ್ಕ್ಯೂಟ್ ಹೌಸ್ ಭೇಟಿ ನೀಡಿದ್ದು, ಅಲ್ಲಿ ಒಂದು ಕೋಣೆಯಲ್ಲಿ ಕುಳಿತು ಕಾಯುತ್ತಿದ್ದರು ಎನ್ನಲಾಗಿದೆ. ಸುಮಾರು 20 ನಿಮಿಷಗಳ ನಂತರ, ಓವೈಸಿ ತಮ್ಮ ಭದ್ರತಾ ಸಿಬ್ಬಂದಿಯೊಂದಿಗೆ ಅಲ್ಲಿಗೆ ಆಗಮಿಸಿದ್ದಾರೆ..