ವೆಲ್ಲಿಂಗ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ವೆಲ್ಲಿಂಗ್ಟನ್ ಟೆಸ್ಟ್ ಪಂದ್ಯದ 3ನೇ ದಿನದಂದು ಆರಂಭಿಕ ಬ್ಯಾಟರ್ ಕೆ ಎಲ್ ರಾಹುಲ್ (KL Rahul) ಐತಿಹಾಸಿಕ ಶತಕ ಸಿಡಿಸಿ ಮಿಂಚಿದ್ದಾರೆ. ಈ ಶತ. ಈ ಶತಕದ ಮೂಲಕ ರಾಹುಲ್, ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ (SENA ದೇಶಗಳು) ಈ ಎಲ್ಲಾ ರಾಷ್ಟ್ರಗಳಲ್ಲಿ ಟೆಸ್ಟ್ ಶತಕ ಬಾರಿಸಿದ ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ ಮತ್ತು ಗೌತಮ್ ಗಂಭೀರ್ ಅವರನ್ನೊಳಗೊಂಡ ಟೀಮ್ ಇಂಡಿಯಾ ದಿಗ್ಗಜ ಬ್ಯಾಟರ್ಗಳ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಅಷ್ಟೇ ಅಲ್ಲದೆ, ಈ ಮಹತ್ವದ ಸಾಧನೆ ಮಾಡಿದ ಮೊದಲ ಭಾರತೀಯ ಆರಂಭಿಕ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ.