ಬಸವ ಮಂಟಪ ಕೃತಿ ವಿವಾದದ ಹಿನ್ನೆಲೆಯಲ್ಲಿ ಲೇಖಕ ರವಿ ಹಂಜ್ ಅವರನ್ನು ಕೊಚ್ಚಿಯಲ್ಲಿ ವಶಕ್ಕೆ ಪಡೆಯಲಾಗಿದೆ. ಬಸವಣ್ಣನವರ ಅಸ್ತಿತ್ವವನ್ನು ಪ್ರಶ್ನಿಸಿದ ಮತ್ತು ಆಧಾರರಹಿತ ಆರೋಪಗಳನ್ನು ಮಾಡಿದ ಕೃತಿಯ ವಿರುದ್ಧ ರಾಜ್ಯಾದ್ಯಂತ ತೀವ್ರ ಪ್ರತಿಭಟನೆಗಳು ನಡೆಯುತ್ತಿವೆ. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ SIT ತನಿಖೆಗೆ ಒತ್ತಾಯಿಸಿದೆ. ಸರಕಾರ ಪುಸ್ತಕವನ್ನು ಮುಟ್ಟುಗೋಲು ಹಾಕಿಕೊಂಡಿದೆ. ಬೆಂಗಳೂರು, ನವೆಂಬರ್ 21: ಬಸವ ಮಂಟಪ ಕೃತಿ ವಿವಾದ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಕೃತಿಯ ಲೇಖಕ ರವಿ ಹಂಜ್ ಅವರನ್ನು ಕೇರಳದ ಕೊಚ್ಚಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ.