ಆರೋಗ್ಯ ಸಚಿವರೊಂದಿಗೆ ನಡೆದ ಆಶಾ ಕಾರ್ಯಕರ್ತೆಯರ ಸಭೆ ವಿಫಲವಾಗಿದೆ. ಕನಿಷ್ಠ 15 ಸಾವಿರ ರೂ. ನಿಗದಿತ ಗೌರವಧನ, ಬಾಕಿ ಪ್ರೋತ್ಸಾಹಧನ ಬಿಡುಗಡೆ ಮತ್ತು ಸೇವಾ ಭದ್ರತೆ ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಲಿಖಿತವಾಗಿ ಈಡೇರಿಸುವವರೆಗೂ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ಹಿಂಪಡೆಯುವುದಿಲ್ಲ ಎಂದು ಆಶಾ ಕಾರ್ಯಕರ್ತೆಯರು ಪಟ್ಟು ಹಿಡಿದಿದ್ದಾರೆ. ಬೆಂಗಳೂರು, ನವೆಂಬರ್ 21: ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸುತ್ತೇವೆ ನೀವು ಪ್ರತಿಭಟನೆ ಕೈಬಿಡಿ ಎಂದು ಮನವೊಲಿಸಲು ಆರೋಗ್ಯ ಸಚಿವ ಯುಟಿ ಖಾದರ್ ನಡೆಸಿದ ಸಭೆ ವಿಫಲವಾಗಿದೆ. ಸಚಿವರ ಮನವಿಗೂ ಒಪ್ಪದ ಆಶಾ ಕಾರ್ಯಕರ್ತೆಯರು, ತಮ್ಮ ಬೇಡಿಕೆಗಳು ಈಡೇರುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.