2026ರ ಟಿ20 ವಿಶ್ವಕಪ್ ವಿಜೇತ ನಾಯಕ ಸೂರ್ಯಕುಮಾರ್ ಯಾದವ್ಗೆ ಭಾರತ T20 ತಂಡಕ್ಕೆ ಮರಳುವ ಅವಕಾಶ ಕ್ಷೀಣಿಸಿದೆ. ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ ಅವರಿಗೇ ತಂಡದಲ್ಲಿ ಸ್ಥಾನ ಕಲ್ಪಿಸಲು ಕಷ್ಟವಾಗಿರುವಾಗ, ಸೂರ್ಯಕುಮಾರ್ ಅವರಿಗೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು BCCI ಮೂಲಗಳು ಸ್ಪಷ್ಟಪಡಿಸಿವೆ. ದೇಶೀಯ ಕ್ರಿಕೆಟ್ನಲ್ಲಿ ಉತ್ತಮ ಪ್ರದರ್ಶನ ನೀಡಿದರೂ, ಸದ್ಯದ ತಂಡದ ಸಂಯೋಜನೆಯಲ್ಲಿ SKYಗೆ ಸ್ಥಾನವಿಲ್ಲ. ಭಾರತ ಟಿ20 ತಂಡದ ಮಾಜಿ ನಾಯಕ ಹಾಗೂ 2026ರ ಟಿ20 ವಿಶ್ವಕಪ್ ವಿಜೇತ ನಾಯಕ ಸೂರ್ಯಕುಮಾರ್ ಯಾದವ್ಗೆ ಸದ್ಯ ಭಾರತ ತಂಡಕ್ಕೆ ಮರಳುವ ಅವಕಾಶ ಕ್ಷೀಣಿಸಿದೆ. ಸದ್ಯದ ಪರಿಸ್ಥಿತಿಯಲ್ಲಿ ಸೂರ್ಯಕುಮಾರ್ ಅವರನ್ನು ಆಯ್ಕೆ ಸಮಿತಿ ಪರಿಗಣಿಸುತ್ತಿಲ್ಲ ಎಂದು ಬಿಸಿಸಿಐ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ(PC-PTI).