ಇಂಜಿನಿಯರಿಂಗ್ ಸೇರುವ ಗ್ರಾಮೀಣ ಸರ್ಕಾರಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸಿಗಲಿದೆ ಶೇ. 7.5 ಪ್ರತ್ಯೇಕ ಮೀಸಲಾತಿ. ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ರಾಜ್ಯದ ವಿವಿಧ ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು ಬಯಸುವ ಗ್ರಾಮೀಣ ಭಾಗದ ಸರ್ಕಾರಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ವೃತ್ತಿಪರ ಕೋರ್ಸ್ಗಳ ಸರ್ಕಾರಿ ಕೋಟಾದ ಸೀಟುಗಳ ಹಂಚಿಕೆಯಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಶೇ. 15ರ ಗ್ರಾಮೀಣ ಮೀಸಲಾತಿ ನಿಯಮಗಳಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಈ ಹಿಂದೆ ಒಟ್ಟಾರೆಯಾಗಿ ಶೇ.