ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಯುತ್ತಿರುವ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಮುಂದುವರಿದಿದೆ. ಡಿಕೆ ಶಿವಕುಮಾರ್ ಹೋರಾಟ ಕೈಬಿಡುವಂತೆ ಭಾವನಾತ್ಮಕ ಮನವಿ ಮಾಡಿದರೂ ಕಾರ್ಯಕರ್ತೆಯರು ಒಪ್ಪಿಲ್ಲ. ಆರೋಗ್ಯ ಸಚಿವ ಯು.ಟಿ. ಖಾದರ್ ಜೊತೆಗಿನ ಸಭೆಯಲ್ಲಿ ಸ್ಪಷ್ಟ ಭರವಸೆ ಸಿಗಲಿಲ್ಲ ಎಂದು ಸಂಘದ ಕಾರ್ಯದರ್ಶಿ ಡಿ. ನಾಗಲಕ್ಷ್ಮೀ ತಿಳಿಸಿದ್ದಾರೆ. ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರಿಸಿ, ಸೋಮವಾರದಿಂದ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಹೇಳಿದ್ದಾರೆ. ಬೆಂಗಳೂರು, ನವೆಂಬರ್ 21: ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.