ಕೆಪಿಎಸ್ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣದಲ್ಲಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮತ್ತು ಸದಸ್ಯೆ ಬಿ.ವಿ. ಗೀತಾ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆ, ಹಣ ವಸೂಲಿ ಆರೋಪದಡಿ 400 ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ. ಸಿಐಡಿ ತನಿಖೆ ಬಳಿಕ ಎಸ್ಐಟಿ ಪ್ರಕರಣ ವಹಿಸಿಕೊಂಡಿದ್ದು, ತಪ್ಪಿತಸ್ಥರಿಗೆ ಶಿಕ್ಷೆ ಖಚಿತಪಡಿಸಲು ತನಿಖೆ ಮುಂದುವರಿದಿದೆ. ಬೆಂಗಳೂರು, ನವೆಂಬರ್ 21: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಪಶುವೈದ್ಯಾಧಿಕಾರಿಗಳ ನೇಮಕ ಹಗರಣ ಪ್ರಕರಣದಲ್ಲಿ ಇಬ್ಬರು ಪ್ರಮುಖ ಆರೋಪಿಗಳಾದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮತ್ತು ಆಯೋಗದ ಸದಸ್ಯೆ ಬಿ.ವಿ. ವಿಶೇಷ ತನಿಖಾ ತಂಡದ (SIT) ಅಧಿಕಾರಿಗಳು ಇಬ್ಬರನ್ನೂ ಪ್ರತ್ಯೇಕವಾಗಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.