ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯ 14 ಆರೋಪಿಗಳ ವಿರುದ್ಧ ಆರೋಪಗಳನ್ನು ರೂಪಿಸಿದೆ. ಎಲ್ಲರೂ ತಪ್ಪಿತಸ್ಥರಲ್ಲ ಎಂದು ಹೇಳಿದ್ದು, ನವೆಂಬರ್ 25 ರಿಂದ ಪ್ರತಿದಿನ ವಿಚಾರಣೆ ಎದುರಿಸಲಿದ್ದಾರೆ. ಸಿಬಿಐ 20,000 ಪುಟಗಳ ಆರೋಪಪಟ್ಟಿ ಸಲ್ಲಿಸಿದ್ದು, ವಿಷಯ ತಜ್ಞರು ಮತ್ತು ಖಾಸಗಿ ವ್ಯಕ್ತಿಗಳ ಜಾಲದ ಮೂಲಕ ಸೋರಿಕೆ ಆಗಿದೆ ಎಂದು ಆರೋಪಿಸಿದೆ. ನವದೆಹಲಿ, ನವೆಂಬರ್ 21: ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯವು 14 ಆರೋಪಿಗಳ ವಿರುದ್ಧ ಔಪಚಾರಿಕವಾಗಿ ಆರೋಪಗಳನ್ನು ರೂಪಿಸಿದೆ.