ಜೈಪುರ: ರಾಜಸ್ಥಾನದಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಒಂಬತ್ತು ಮಂದಿ ಮೃತಪಟ್ಟಿದ್ದು, ಆರು ಜನರು ಗಾಯಗೊಂಡಿದ್ದಾರೆ. ಮೃತರಲ್ಲಿ ಮಕ್ಕಳು ಕೂಡ ಸೇರಿದ್ದಾರೆ. ಕೋ. ಕೋಟಾ-ಉದಯಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಶಂಭುಪುರ ಗ್ರಾಮದ ಸಮೀಪ ಈ ದುರ್ಘಟನೆ ಸಂಭವಿಸಿದೆ. ವೇಗವಾಗಿ ಚಲಿಸುತ್ತಿದ್ದ ಕ್ರೂಸರ್ ವಾಹನ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ.ಘಟನೆ ರಾತ್ರಿ ಸುಮಾರು 2 ಗಂಟೆಗೆ ನಡೆದಿದೆ. ವಾಹನದಲ್ಲಿ ಮಹಾರಾಷ್ಟ್ರ ಮೂಲದ ಒಂದೇ ಕುಟುಂಬದ ಒಟ್ಟು 15 ಮಂದಿ ಪ್ರಯಾಣಿಸುತ್ತಿದ್ದರು. ಇವರು ರಾಜಸ್ಥಾನದ ಖಾಟು ಶ್ಯಾಮ್ ದೇವಸ್ಥಾನಕ್ಕೆ ಭೇಟಿ ನೀಡಿ ಮಹಾರಾಷ್ಟ್ರಕ್ಕೆ ಮರಳುತ್ತಿದ್ದರು.