ನವದೆಹಲಿ: ದೇಶೀಯ ಕ್ರಿಕೆಟ್ನಲ್ಲಿ ಸೂರ್ಯಕುಮಾರ್ ಯಾದವ್ (Suryakumar Yadav) ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದ್ದರೂ, ಟೀಮ್ ಇಂಡಿಯಾದ ಆಯ್ಕೆ ಯೋಜನೆಯಲ್ಲಿ ಅವರ ಸ್ಥಾನ ಬದಲಾಗಿಲ್ಲ. ನವೆಂಬರ್ 21ರ ಶನಿವಾರದಂದು ಬಿಸಿಸಿಐ ಮೂಲಗಳನ್ನು ಉಲ್ಲೇಖಿಸಿ ಎಎನ್ಐ ಪ್ರಕಟಿಸಿರುವ ವರದಿಯ ಪ್ರಕಾರ, ಭಾರತದ ಮಾಜಿ ನಾಯಕ ಸೂರ್ಯಕುಮಾರ್ ಯಾದವ್ ಅವರನ್ನು ಸದ್ಯಕ್ಕೆ ಆಯ್ಕೆಗೆ ಪರಿಗಣಿಸಲಾಗುತ್ತಿಲ್ಲ. ಇದೇ ವೇಳೆ, ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಕೂಡ ತಂಡದ ವೈಟ್-ಬಾಲ್ ಸಂಯೋಜನೆಯಲ್ಲಿ ಸ್ಥಾನ ಪಡೆಯಲು ಪರದಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.2026ರ ಟಿ20 ವಿಶ್ವಕಪ್ ಗೆಲುವಿಗೆ ಭಾರತ ತಂಡವನ್ನು ಮುನ್ನಡೆಸಿದ್ದ ಸೂರ್ಯಕುಮಾರ್ ಯಾದವ್ ಅವರನ್ನು ಐಪಿಎಲ್ ಮುಕ್ತಾಯದ ಬಳಿಕ ಟಿ20 ತಂಡದಿಂದ ಕೈಬಿಡಲಾಗಿತ್ತು.