ಗುಜರಾತ್ನ ಕಛ್ ಜಿಲ್ಲೆಯ ಭುಜ್-ಖಾವ್ಡಾ ಹೆದ್ದಾರಿಯಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ಎರಡು ತುಂಡಾಗಿದ್ದು, ಮೂರು ತಿಂಗಳ ಹಸುಗೂಸು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿದ್ದಾರೆ. ಮೃತರು ಉತ್ತರಾಖಂಡದಿಂದ ಕಛ್ಸಗೆ ಪ್ರವಾಸಕ್ಕೆ ಬಂದಿದ್ದ ಸೇನಾ ಕುಟುಂಬದವರು ಎನ್ನಲಾಗಿದೆ. ಗುಜರಾತ್, ನವೆಂಬರ್ 22: ಗುಜರಾತ್ನ ಕಛ್ ಜಿಲ್ಲೆಯ ಭುಜ್-ಖಾವ್ಡಾ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂರು ತಿಂಗಳ ಹಸುಗೂಸು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿದ್ದಾರೆ. ಎದುರಿನಿಂದ ಬರುತ್ತಿದ್ದ ಟ್ರಕ್ಗೆ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿ ಎರಡು ತುಂಡಾಗಿದೆ.