ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ 2027ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2027) ಆರಂಭಕ್ಕೂ ಮುನ್ನವೇ ಭರ್ಜರಿ ಸಿಹಿಸುದ್ದಿ ಸಿಕ್ಕಿದೆ. ಆಸ್ಟ್ರೇಲಿಯಾದ ಬಿಡುವಿಲ್ಲದ ಅಂತಾರಾಷ್ಟ್ರೀಯ ಕ್ರಿಕೆಟ್ ವೇಳಾಪಟ್ಟಿಯ ನಡುವೆಯೂ, ಸ್ಟಾರ್ ವೇಗಿ ಜೋಶ್ ಹೇಝಲ್ವುಡ್ ಮುಂಬರುವ ಐಪಿಎಲ್ನಲ್ಲಿ ಆಡಲು ತಾವು ಸಂಪೂರ್ಣ ಲಭ್ಯವಿರುವುದಾಗಿ ಖಚಿತಪಡಿಸಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-20 ರಲ್ಲಿ ಆಸ್ಟ್ರೇಲಿಯನ್ ಆಟಗಾರರು ಕಣಕ್ಕಿಳಿಯಲಿದ್ದಾರಾ? ಈ ಪ್ರಶ್ನೆಗೆ ಇನ್ನೂ ಸ್ಪಷ್ಟ ಉತ್ತರ ಸಿಕ್ಕಿಲ್ಲ. ಇದಾಗ್ಯೂ, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಅಭಿಮಾನಿಗಳಿಗೆ ಆಸೀಸ್ ಸ್ಟಾರ್ ವೇಗಿ ಜೋಶ್ ಹೇಝಲ್ವುಡ್ ಕಡೆಯಿಂದ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ.