ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ತೆಲಗರಹಳ್ಳಿ ಬಳಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನೀಡುವ ಅನ್ನದಲ್ಲಿ ಹುಳುಗಳು ಪತ್ತೆಯಾಗಿವೆ. ಎರಡು ದಿನಗಳಿಂದ ಕುಡಿಯುವ ನೀರಿಗೂ ತೊಂದರೆಯಾಗಿದೆ. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ಮಾಧ್ಯಮ ವರದಿ ಬೆನ್ನಲ್ಲೇ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಬೆಂಗಳೂರು, ನವೆಂಬರ್ 22: ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಪೌಷ್ಟಿಕ ಆಹಾರ ಮತ್ತು ವಸತಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಸರ್ಕಾರ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಿದೆ. ಆದರೆ ಅಧಿಕಾರಿಗಳು ಮತ್ತು ಸಿಬ್ಬಂದಿಯ ನಿರ್ಲಕ್ಷ್ಯದಿಂದ ಸರ್ಕಾರಿ ವಸತಿ ಶಾಲೆಗಳಲ್ಲೇ ವಿದ್ಯಾರ್ಥಿಗಳು ಸಂಕಷ್ಟ ಅನುಭವಿಸುವಂತಾಗಿದೆ.