ಖ್ಯಾತ ನಟ ಸಲ್ಮಾನ್ ಖಾನ್ ಅವರನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಟಾರ್ಗೆಟ್ ಮಾಡಿದೆ. ಹಾಗಾಗಿ ಅವರಿಗೆ ಹೆಚ್ಚಿನ ಭದ್ರತೆ ನೀಡಲಾಗುತ್ತಿದೆ. ಎಷ್ಟೇ ಭದ್ರತೆ ಇದ್ದರೂ ಕೂಡ ಸಲ್ಮಾನ್ ಖಾನ್ ಅವರಿಗೆ ಭಯ ಕಡಿಮೆ ಆಗಿಲ್ಲ. ಆ ಬಗ್ಗೆ ಅವರು ಇತ್ತೀಚೆಗೆ ಮಾತನಾಡಿದ್ದಾರೆ. ಬಾಲಿವುಡ್ ಸೂಪರ್ಸ್ಟಾರ್ ಸಲ್ಮಾನ್ ಖಾನ್ ಅವರು ಭಾರತದ ಅತ್ಯಂತ ಬಿಗಿ ಭದ್ರತೆಯನ್ನು ಹೊಂದಿರುವ ಸೆಲೆಬ್ರಿಟಿಗಳಲ್ಲಿ ಒಬ್ಬರಾಗಿದ್ದಾರೆ. ಕುಖ್ಯಾತ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ತಂಡದಿಂದ ಪದೇ ಪದೇ ಜೀವ ಬೆದರಿಕೆಗಳು ಬರುತ್ತಿರುವ ಹಿನ್ನೆಲೆಯಲ್ಲಿ, ಸಲ್ಮಾನ್ ಖಾನ್ ಅವರಿಗೆ ಸರ್ಕಾರದಿಂದ ಉನ್ನತ ಮಟ್ಟದ ಭದ್ರತೆ ಹಾಗೂ ಖಾಸಗಿ ಏಜೆನ್ಸಿಗಳಿಂದಲೂ ರಕ್ಷಣೆ ಒದಗಿಸಲಾಗಿದೆ.