ಬೆಂಗಳೂರಿನಲ್ಲಿ 25 ಹೊಸ ಇಂದಿರಾ ಕ್ಯಾಂಟೀನ್ಗಳನ್ನು ತೆರೆಯಲು ಜಿಬಿಎ ಸಿದ್ಧತೆ ನಡೆಸಿದೆ. ಆದರೆ ಈಗಿರುವ ಕ್ಯಾಂಟೀನ್ಗಳಲ್ಲಿ ಗ್ರಾಹಕರ ಸಂಖ್ಯೆ ಕಡಿಮೆಯಾಗಿದ್ದು, ಆಹಾರದ ಗುಣಮಟ್ಟದ ಬಗ್ಗೆಯೂ ಅಸಮಾಧಾನ ವ್ಯಕ್ತವಾಗಿದೆ. ಆಜಾದ್ ನಗರ ಮತ್ತು ಹನುಮಂತನಗರದ ಇಂದಿರಾ ಕ್ಯಾಂಟೀನ್ಗಳಲ್ಲಿ ಟಿವಿ9 ಕನ್ನಡ ನಡೆಸಿದ ರಿಯಾಲಿಟಿ ಚೆಕ್ನಲ್ಲಿ ಕಂಡುಬಂದಿದ್ದೇನು? ಹೊಸ ಕ್ಯಾಂಟೀನ್ಗಳಿಗೂ ಮುನ್ನ ಹಳೆಯವುಗಳ ಸುಧಾರಣೆಗೆ ಜನರು ಏಕೆ ಒತ್ತಾಯಿಸುತ್ತಿದ್ದಾರೆ? ಸಂಪೂರ್ಣ ವರದಿ ಇಲ್ಲಿದೆ. ಬೆಂಗಳೂರು, ನವೆಂಬರ್ 22: ಬಡವರು ಮತ್ತು ದುಡಿಯುವ ವರ್ಗದ ಜನರ ಹಸಿವು ನೀಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಇಂದಿರಾ ಕ್ಯಾಂಟೀನ್ ಕೂಡ ಒಂದು.