ಬೆಂಗಳೂರಿನ ರಾಗಿಗುಡ್ಡ ಮೆಟ್ರೋ ನಿಲ್ದಾಣದ ಬಳಿ ಅಗ್ನಿ ಅವಘಡ ಸಂಭವಿಸಿದೆ. ಮೆಟ್ರೋ ನಿಲ್ದಾಣದ ಕೂಗಳತೆ ದೂರದಲ್ಲಿ ಬೆಂಕಿ ವ್ಯಾಪಿಸಿ, ದಟ್ಟ ಹೊಗೆ ಆವರಿಸಿದ್ದರಿಂದ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಯಿತು. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ, ಪೊಲೀಸರು ತನಿಖೆ ಶುರು ಮಾಡಿದ್ದಾರೆ. ಬೆಂಗಳೂರು, ನವೆಂಬರ್ 22: ಬೆಂಗಳೂರಿನ ರಾಗಿಗುಡ್ಡ ಮೆಟ್ರೋ ನಿಲ್ದಾಣದ ಸಮೀಪ ಶನಿವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಮೆಟ್ರೋ ನಿಲ್ದಾಣದಿಂದ ಕೂಗಳತೆ ದೂರದಲ್ಲೇ ಬೆಂಕಿ ವ್ಯಾಪಿಸಿ, ದಟ್ಟವಾದ ಹೊಗೆ ಆವರಿಸಿದ್ದರಿಂದ ಸುತ್ತಮುತ್ತಲಿನ ನಿವಾಸಿಗಳು ಮತ್ತು ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಯಾಗಿದೆ.