ನವೆಂಬರ್ 22ರಂದು ಕರ್ನಾಟಕದ ಹಲವು ನಗರಗಳಲ್ಲಿ ವಾಯುಮಾಲಿನ್ಯದ ಪ್ರಮಾಣ ಗಮನ ಸೆಳೆದಿದೆ. ಬೆಂಗಳೂರಿನಲ್ಲಿ AQI 188 ದಾಖಲಾಗಿದ್ದು, ಸಿಲ್ಕ್ ಬೋರ್ಡ್ ಮತ್ತು ಜಯನಗರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟ ಕಳಪೆಯಾಗಿದೆ. ಮೈಸೂರು, ಮಂಗಳೂರು, ಹುಬ್ಬಳ್ಳಿ ನಗರಗಳ ವಾಯು ಗುಣಮಟ್ಟದ ಸ್ಥಿತಿಗತಿ, ಮಾಲಿನ್ಯಕ್ಕೆ ಕಾರಣಗಳು ಮತ್ತು ಆರೋಗ್ಯದ ಮುನ್ನೆಚ್ಚರಿಕೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಬೆಂಗಳೂರು, ನವೆಂಬರ್ 22: ಕರ್ನಾಟಕದ ಹಲವು ನಗರಗಳಲ್ಲಿ ವಾಯುಮಾಲಿನ್ಯದ ಪ್ರಮಾಣ ಏರಿಕೆಯಾಗಿದ್ದು, ಬೆಂಗಳೂರಿನಲ್ಲೂ ಗಾಳಿಯ ಗುಣಮಟ್ಟ ಆತಂಕ ಮೂಡಿಸಿದೆ. ಮೈಸೂರು, ಮಂಗಳೂರು, ಹುಬ್ಬಳ್ಳಿ ಸೇರಿದಂತೆ ವಿವಿಧ ನಗರಗಳಲ್ಲೂ ವಾಯು ಗುಣಮಟ್ಟದಲ್ಲಿ ವ್ಯತ್ಯಾಸ ಕಂಡುಬಂದಿದೆ.