ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮೂರು ದಿನಗಳ ಜಪಾನ್ ಪ್ರವಾಸ ಕೈಗೊಂಡಿದ್ದಾರೆ. ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಭಾಗಿಯಾಗಲಿರುವ ಸಿಎಂ, ಜಪಾನ್ನ ನಗರಾಭಿವೃದ್ಧಿ, ಫ್ಲೈಓವರ್ ತಂತ್ರಜ್ಞಾನ ಹಾಗೂ ಹೊಸ ತಂತ್ರಜ್ಞಾನಗಳ ಅಳವಡಿಕೆ ಬಗ್ಗೆ ಅಧ್ಯಯನ ನಡೆಸಲಿದ್ದಾರೆ. ರಾಜ್ಯದಲ್ಲಿ ಟೊಯೋಟಾ ಕಂಪನಿಯ ವಿಸ್ತರಣೆ ಬಗ್ಗೆ ಅವರು ಕಂಪನಿಯನ್ನು ಕೋರಲಿದ್ದಾರೆ. ಬೆಂಗಳೂರು, ನವೆಂಬರ್ 22: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗ್ಲೋಬಲ್ ಇನ್ವೆಸ್ಟರ್ಸ್ ಮೀಟಿಂಗ್ಗಾಗಿ ಮೂರು ದಿನಗಳ ಜಪಾನ್ ಪ್ರವಾಸ ಕೈಗೊಂಡಿದ್ದಾರೆ. ಬೆಂಗಳೂರಿನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ಈ ಭೇಟಿಯ ಉದ್ದೇಶಗಳನ್ನು ವಿವರಿಸಿದರು.