Thiruparankundram: ತಮಿಳುನಾಡಿನ ಮದುರೈ ಜಿಲ್ಲೆಯ ತಿರುಪರಂಕುಂದ್ರಂ ಬೆಟ್ಟದಲ್ಲಿ ಕಾರ್ತಿಕ ದೀಪ ಬೆಳಗಿಸುವ ವಿಚಾರ ಮತ್ತೆ ಕಾನೂನು ಹೋರಾಟಕ್ಕೆ ಕಾರಣವಾಗಿದೆ. ಬೆಟ್ಟದ ಮೇಲಿರುವ ವಿವಾದಿತ ದೀಪಸ್. ಬೆಟ್ಟದ ಮೇಲಿರುವ ವಿವಾದಿತ ದೀಪಸ್ತಂಭದಲ್ಲಿ ನವೆಂಬರ್ 24ರಂದು ದೀಪ ಬೆಳಗಿಸಲು ಸುಪ್ರೀಂ ಕೋರ್ಟ್ ನೀಡಿದ್ದ ಒಂದು ಬಾರಿಯ ಅನುಮತಿಯನ್ನು ಮರುಪರಿಶೀಲಿಸುವಂತೆ ತಮಿಳುನಾಡು ಸರ್ಕಾರ ಅರ್ಜಿ ಸಲ್ಲಿಸಿದೆ.ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ (HR&CE) ಆಯುಕ್ತರು ಈ ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದು, ನವೆಂಬರ್ 20ರಂದು ಸುಪ್ರೀಂ ಕೋರ್ಟ್ ನೀಡಿದ್ದ ಮಧ್ಯಂತರ ಆದೇಶವನ್ನು ಪ್ರಶ್ನಿಸಿದ್ದಾರೆ.