ಮುಂಬೈ(ಅ.30): ಮುಂಬರುವ 2027ರ ಐಪಿಎಲ್ ಟೂರ್ನಿಯಲ್ಲಿ ಶತಾಯಗತಾಯ ಕಪ್ ಗೆಲ್ಲಲೇಬೇಕು ಎಂದು ಪಣ ತೊಟ್ಟಿರುವ ಮುಂಬೈ ಇಂಡಿಯನ್ಸ್ ತಂಡವು ತನ್ನ ಕೋಚಿಂಗ್ ಸ್ಟಾಫ್ ವಿಚಾರದಲ್ಲಿ ಮತ್ತೊಮ್ಮೆ ಮೇಜರ್ ಸರ್ಜರಿ ಮಾಡಿದೆ. ಈ ಹಿಂದೆ ಕೋಚ್ ಆಗಿದ್ದ ಮಹೇಲಾ ಜಯವರ್ಧನೆ ಅವರು ತಮ್ಮ ಹೆಡ್ ಕೋಚ್ ಸ್ಥಾನದಿಂದ ಕೆಳಗಿಳಿದಿದ್ದರು. ಇದೀಗ ಸಹಾಯಕ ಕೋಚ್ಗಳು ತಮ್ಮ ಸ್ಥಾನವನ್ನು ತೆರವು ಮಾಡಿದ್ದಾರೆ. ಭಾರತದ ಮಾಜಿ ಆರಂಭಿಕ ಬ್ಯಾಟರ್ ರಾಬಿನ್ ಉತ್ತಪ್ಪ ಅವರನ್ನು ತಂಡದ ನೂತನ ಬ್ಯಾಟಿಂಗ್ ಕೋಚ್ ಆಗಿ ನೇಮಕ ಮಾಡಿರುವುದಾಗಿ ಫ್ರಾಂಚೈಸಿ ಶುಕ್ರವಾರ ಘೋಷಿಸಿದೆ. ಈ ಹಿಂದೆ ತಂಡದ ಬ್ಯಾಟಿಂಗ್ ಕೋಚ್ ಆಗಿದ್ದ ಕೀರನ್ ಪೊಲಾರ್ಡ್, ಇದೀಗ ಮುಖ್ಯ ಕೋಚ್ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ.