ಬೆಂಗಳೂರು: ಕನ್ನಡ ಭಾಷೆಯ ಉಳಿವಿಗಾಗಿ ಪ್ರತಿಯೊಬ್ಬರೂ ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು. ಬೇರೆ ರಾಜ್ಯಗಳಿಂದ ವಲಸೆ ಬರುವವರಿಗೆ ಕನ್ನಡ ಕಲಿಸುವ ಜವಾಬ್ದಾರಿಯೂ ನಮ್ಮ ಮೇಲಿದೆ. ಆದರೆ ಈ ನಿಟ್ಟಿನಲ್ಲ. ಆದರೆ ಈ ನಿಟ್ಟಿನಲ್ಲಿ ನಿರೀಕ್ಷಿತ ಮಟ್ಟದ ಪ್ರಯತ್ನಗಳು ನಡೆಯುತ್ತಿಲ್ಲ ಎಂದು ಚಿತ್ರನಟ ಶ್ರೀನಿವಾಸ ವಸಿಷ್ಟ ಕಳವಳ ವ್ಯಕ್ತಪಡಿಸಿದರು.ತ್ಯಾಗರಾಜ ನಗರ ನಿವಾಸಿಗಳ ಸಂಘ ಹಾಗೂ ನಡಿಗೆದಾರರ ಸಂಘದ ವತಿಯಿಂದ ಆಯೋಜಿಸಿದ್ದ 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.ಎಲ್ಲರೂ ಕನ್ನಡ ಮಾತಾಡಿಕನ್ನಡ ಭಾಷೆ ಸಮೃದ್ಧವಾಗಿ ಬೆಳೆಯಬೇಕಾದರೆ ಎಲ್ಲರೂ ಕನ್ನಡ ಮಾತನಾಡಬೇಕು. ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರು ಭಾಷೆಯ ಉಳಿವಿಗಾಗಿ ಮಾಡುತ್ತಿರುವ ಪ್ರಯತ್ನಗಳನ್ನು ನಾವು ಮಾದರಿಯಾಗಿ ತೆಗೆದುಕೊಳ್ಳಬೇಕು.