ಶಿವಮೊಗ್ಗ: ಕಳೆದ ಮೂರು ವರ್ಷಗಳಿಂದ ರಾಜ್ಯದಲ್ಲಿ ರಸ್ತೆಗಳ ಗುಂಡಿಗಳನ್ನು ಮುಚ್ಚುವ ಕೆಲಸವೂ ಸಮರ್ಪಕವಾಗಿ ನಡೆದಿಲ್ಲ. ಶಾಸಕರ ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ನೀಡುತ್ತಿಲ್ಲ ಎಂದು ಬಿಜೆಪಿ ರಾಜ್. ಸರ್ಕಾರ ಕೇವಲ ಜಾಹೀರಾತುಗಳ ಮೂಲಕ ’ನುಡಿದಂತೆ ನಡೆದಿದ್ದೇವೆ’ ಎಂದು ಹೇಳಿಕೊಳ್ಳುತ್ತಿದೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ರಾಜ್ಯ ಸರ್ಕಾರದ ಆಡಳಿತ ವೈಖರಿಯನ್ನು ತೀವ್ರವಾಗಿ ಟೀಕಿಸಿದರು.ರಾಜ್ಯದಲ್ಲಿ ತೀವ್ರ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ರೈತರಿಗೆ ಪರಿಹಾರ ನೀಡುವ ಯೋಗ್ಯತೆ ಇಲ್ಲದ ರಾಜ್ಯ ಸರ್ಕಾರ ಶಾಸಕರಿಗೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಿ ಕ್ಯಾಬಿನೆಟ್ ದರ್ಜೆ ಕಲ್ಪಿಸುವುದರಲ್ಲಿ ನಿರತವಾಗಿದೆ. ಬರಗಾಲದ ಸಂದರ್ಭದಲ್ಲಿ ನಿಗಮ ಮಂಡಳಿಗಳಿಗೆ ನೇಮಕಾತಿ ಮಾಡುವ ಅನಿವಾರ್ಯತೆ ಮುಖ್ಯಮಂತ್ರಿಗಳಿಗೆ ಏನಿತ್ತು ಎಂದು ಪ್ರಶ್ನಿಸಿದರು.