ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆ (KSFES) 472 ಅಗ್ನಿಶಾಮಕ ಮತ್ತು ಅಗ್ನಿಶಾಮಕ ಠಾಣಾಧಿಕಾರಿ (FSO) ಹುದ್ದೆಗಳಿಗೆ KEA ಮೂಲಕ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. 10ನೇ ತರಗತಿ, PUC ಅಥವಾ ವಿಜ್ಞಾನ ಪದವಿ ಪೂರ್ಣಗೊಳಿಸಿದವರು ಅರ್ಜಿ ಸಲ್ಲಿಸಬಹುದು. ಮಾಸಿಕ ವೇತನ 37,500 ರಿಂದ 76,100 ರೂ. ವರೆಗೆ. ಆಸಕ್ತರು ಡಿಸೆಂಬರ್ 22 ರೊಳಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ. ಕರ್ನಾಟಕ ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ. ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ (KSFES) ಖಾಲಿ ಇರುವ ಒಟ್ಟು 472 ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಮೂಲಕ ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ.