ವೆಲ್ಲಿಂಗ್ಟನ್ನ ಬೇಸಿನ್ ರಿಸರ್ವ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ 5ನೇ ದಿನದಾಟ ಬ್ಯಾಟರ್ಗಳಿಗೆ ವರದಾನವಾಗಲಿದೆಯೇ ಅಥವಾ ಬೌಲರ್ಗಳಿಗೆ ನೆರವಾಗಲಿದೆಯೇ ಎಂಬ ಕುತೂಹಲ ಮೂಡಿದೆ. ಸದ್ಯದ ಸ್ಥಿತಿಯಲ್ಲಿ ಬೇಸಿನ್ ರಿಸರ್ವ್ ಪಿಚ್ ಬ್ಯಾಟಿಂಗ್ಗೆ ಹೆಚ್ಚು ಸಹಕಾರಿಯಾಗಿ ಬದಲಾಗಿದ್ದರೂ, ಕೊನೆಯ ದಿನದಾಟದಲ್ಲಿ ಪಿಚ್ ವರ್ತಿಸಲಿರುವ ರೀತಿಯ ಸಂಪೂರ್ಣ ಚಿತ್ರಣ ಇಲ್ಲಿದೆ. ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯವು ಅಂತಿಮ ಘಟ್ಟ ತಲುಪಿದೆ. ಕೊನೆಯ ದಿನದಾಟದಲ್ಲಿ ಉಭಯ ತಂಡಗಳಿಂದ ಜಿದ್ದಾಜಿದ್ದಿನ ಪೈಪೋಟಿ ನಿರೀಕ್ಷಿಸಲಾಗಿದ್ದು, ಈ ಹೋರಾಟದಲ್ಲಿ ಮೇಲುಗೈ ಸಾಧಿಸಿ ಟೀಮ್ ಇಂಡಿಯಾ ಗೆಲುವಿನ ನಗೆ ಬೀರಲಿದೆಯಾ ಅಥವಾ ನ್ಯೂಝಿಲೆಂಡ್ ಪಂದ್ಯವನ್ನು ಡ್ರಾ ಮಾಡಿಕೊಳ್ಳಲಿದೆಯಾ ಎಂಬುದೇ ಈಗಿರುವ ದೊಡ್ಡ ಕುತೂಹಲ.