ಆಕರ್ಷಕ ಪೋಸ್ಟರ್ ಮೂಲಕ ‘ಹನುಮಾನ್ 2: ದಿ ರೈಸ್ ಆಫ್ ವಾನರಾಸ್’ ಸಿನಿಮಾ ಅನೌನ್ಸ್ ಮಾಡಲಾಗಿದೆ. ಈ ಬಹುನಿರೀಕ್ಷಿತ ಚಿತ್ರದಲ್ಲಿ ನಟ ಪಂಜ ವೈಷ್ಣವ್ ತೇಜ್ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ವಿ.ಐ. ಆನಂದ್ ಅವರು ಈ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಲಿದ್ದಾರೆ. 2024ರ ಜನವರಿ 12ರಂದು ‘ಹನು-ಮಾನ್’ ಸಿನಿಮಾ ಬಿಡುಗಡೆಯಾಗಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಅಬ್ಬರಿಸಿತ್ತು. ಸೂಪರ್ ಹೀರೋ ಕಥೆಯನ್ನು ಹೊಂದಿದ್ದ ಆ ಚಿತ್ರವು ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದಿತ್ತು. ‘ಹನು-ಮಾನ್’ ಸಿನಿಮಾದ ಅಭೂತಪೂರ್ವ ಯಶಸ್ಸಿನ ಬೆನ್ನಲ್ಲೇ, ನಿರ್ಮಾಣ ಸಂಸ್ಥೆ ‘ಪ್ರೈಮ್ಶೋ ಎಂಟರ್ಟೈನ್ಮೆಂಟ್’ ತನ್ನ ಫ್ಯಾಂಟಸಿ ಸಿನಿಮಾ ಜಗತ್ತನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯಲು ಮುಂದಾಗಿದೆ.