* ಉಡುಪಿಯ ಶ್ರೀಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ದೀಪೋತ್ಸವಉಡುಪಿ: ತೆಂಕಪೇಟೆಯಲ್ಲಿರುವ ಶ್ರೀಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಭಾನುವಾರ ಮುಂಜಾನೆ 5 ಗಂಟೆಗೆ ಸಾವಿರಾರು ಹಣತೆ ದೀಪಗಳ ಜ್ಯೋತಿ. ದೇವಳದ ಧರ್ಮದರ್ಶಿ ಗುಜ್ಜಾಡಿ ಪ್ರಭಾಕರ ನಾಯಕ, ಸೇವಾದಾರ ಗೋಕುಲದಾಸ ಭಟ್, ಆಡಳಿತ ಮಂಡಳಿಯ ಸದಸ್ಯರು, ಜಿಎಸ್ಬಿ ಯುವಕ ಹಾಗೂ ಮಹಿಳಾ ಮಂಡಳಿಯ ಸದಸ್ಯರು, ಸ್ವಯಂ ಸೇವಕರು ಸಹಕರಿಸಿದರು.ವಿವಿಧ ಭಜನಾ ಮಂಡಳಿಯ ಸದಸ್ಯರಿಂದ ಅಹೋರಾತ್ರಿ ಭಜನಾ ಕಾರ್ಯಕ್ರಮ ನಡೆಯಿತು. ದೇವರ ಸನ್ನಿಧಿಯಲ್ಲಿ ಸುಪ್ರಭಾತ, ಭಜನಾ ಕಾರ್ಯಕ್ರಮ, ದೀಪಾರಾಧನೆ, ಕಾಕಡಾರತಿ ಹಾಗೂ ಪ್ರಸಾದ ವಿತರಣೆ ನಡೆಯಿತು.