ಮುಂಬೈ : ಈಶಾ ಫೌಂಡೇಶನ್ನ ಸದ್ಗುರು ಜಗ್ಗಿ ವಾಸುದೇವ್ ಅವರಿಗೆ 2026ನೇ ಸಾಲಿನ ಪ್ರತಿಷ್ಠಿತ ಗ್ಲೋಬಲ್ ಪೀಸ್ ಆನರ್ಸ್ (‘ಜಾಗತಿಕ ಶಾಂತಿ ಗೌರವ’) ಪ್ರಶಸ್ತಿ ಪ್ರದಾನ ಮಾಡಲಾಯಿತು. ಮುಂಬೈನಲ್ಲಿ ನಡೆ. ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಹಾಗೂ ಸಾಂಸ್ಕೃತಿಕ ವ್ಯವಹಾರಗಳ ಸಚಿವ ಆಶಿಶ್ ಶೇಲಾರ್ ಅವರು ಶನಿವಾರ ನಡೆದ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಿದರು.ಸನ್ಮಾನಕ್ಕೂ ಮುನ್ನ ನಡೆದ ಸಂವಾದದಲ್ಲಿ ಸದ್ಗುರು ಮತ್ತು ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಆಂತರಿಕ ಶಾಂತಿ, ಒತ್ತಡ, ವೃತ್ತಿಜೀವನದ ಸವಾಲುಗಳು, ಸಾಮಾಜಿಕ ಜಾಲತಾಣ ಹಾಗೂ ಸಾರ್ವಜನಿಕ ಜೀವನದ ಕುರಿತು ಸಂವಾದ ನಡೆಸಿದರು.