ರೈಸಿಂಗ್ ಸ್ಟಾರ್ಸ್ ಏಷ್ಯಾಕಪ್ನಲ್ಲಿ ಪಾಕಿಸ್ತಾನ ಎ ವಿರುದ್ಧದ ಪಂದ್ಯದಲ್ಲಿ ಭಾರತ ಎ ತಂಡದ ನಾಯಕ ತಿಲಕ್ ವರ್ಮಾ ಕ್ಯಾಚ್ ಹಿಡಿಯುವಾಗ ಗಾಯಗೊಂಡಿದ್ದಾರೆ. ದೋಹಾದಲ್ಲಿ ನಡೆದ ಪಂದ್ಯದಲ್ಲಿ ಮುಖಕ್ಕೆ ಪೆಟ್ಟು ಬಿದ್ದು ಮೈದಾನದಿಂದ ಹೊರನಡೆದಿದ್ದಾರೆ. ಉಪನಾಯಕ ರಿಂಕು ಸಿಂಗ್ ತಂಡದ ಜವಾಬ್ದಾರಿ ವಹಿಸಿಕೊಂಡರು. ಭಾರತ ತಂಡಕ್ಕೆ ಇದು ದೊಡ್ಡ ಆತಂಕ. 2026ರ ರೈಸಿಂಗ್ ಸ್ಟಾರ್ಸ್ ಏಷ್ಯಾಕಪ್ ಟೂರ್ನಿಯಲ್ಲಿ ಪಾಕಿಸ್ತಾನ ಎ ವಿರುದ್ಧದ ಪಂದ್ಯದಲ್ಲಿ ಭಾರತ ಎ ತಂಡದ ನಾಯಕ ತಿಲಕ್ ವರ್ಮಾ ಗಾಯಗೊಂಡಿದ್ದಾರೆ. ದೋಹಾದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಕ್ಯಾಚ್ ಹಿಡಿಯಲು ಪ್ರಯತ್ನಿಸುವಾಗ ತಿಲಕ್ ಗಾಯಕ್ಕೆ ತುತ್ತಾಗಿದ್ದಾರೆ. ಬಳಿಕ ಉಪನಾಯಕ ರಿಂಕು ಸಿಂಗ್ ತಂಡದ ನಾಯಕತ್ವದ ಜವಾಬ್ದಾರಿ ವಹಿಸಿಕೊಂಡರು.