ಚಳಿಗಾಲ ಆರಂಭವಾಗಿದೆ. ಈ ಋತುವಿನಲ್ಲಿ ಆರೋಗ್ಯದ ಬಗ್ಗೆ ತುಸು ಹೆಚ್ಚೇ ಕಾಳಜಿ ವಹಿಸಬೇಕು. ಆರೋಗ್ಯದ ದೃಷ್ಟಿಯಿಂದ ಈ ಸಮಯದಲ್ಲಿ ಎಳ್ಳು ಸೇವಿಸುವುದು ಒಳ್ಳೆಯದು ಎಂದು ಹೇಳಲಾಗುತ್ತದೆ. ಈ ಸಣ್ಣ ಬೀಜಗಳು ಪ್ರೋಟೀನ್, ಆರೋಗ್ಯಕರ ಕೊಬ್ಬು, ಫೈಬರ್, ಕ್ಯಾಲ್ಸಿಯಂ, ಕಬ್ಬಿಣ, ಮೆಗ್ನೇಸಿಯಂ ಮತ್ತು ಸತುವಿನಂತಹ ಪೋಷಕಾಂಶಗಳನ್ನು ಹೊಂದಿದ್ದು, ಇದನ್ನು ಸೇವನೆ ಮಾಡುವುದರಿಂದ ದೇಹದ ರೋಗನಿರೋಧಕ ಶಕ್ತಿ ಬಲವಾಗುವುದಲ್ಲದೆ, ಒಟ್ಟಾರೆ ಆರೋಗ್ಯ ಸುಧಾರಿಸುತ್ತದೆ. ಈ ಋತುವಿನಲ್ಲಿ ಕೊರೆಯುವ ಚಳಿಯ ಜೊತೆಗೆ ಶೀತ, ಕೆಮ್ಮು, ನೆಗಡಿಯಂತಹ ಆರೋಗ್ಯ ಸಮಸ್ಯೆಗಳು ಕೂಡ ಕಾಣಿಸಿಕೊಳ್ಳುತ್ತವೆ. ಆದ್ದರಿಂದ ಚಳಿಗಾಲದಲ್ಲಿ ಆರೋಗ್ಯದ ಬಗ್ಗೆ ತುಸು ಹೆಚ್ಚೇ ಕಾಳಜಿಯನ್ನು ವಹಿಸಬೇಕು. ಇದಕ್ಕಾಗಿ ಈ ಸಮಯದಲ್ಲಿ ಎಳ್ಳು ಸೇವನೆ ಮಾಡುವುದು ಉತ್ತಮ ಎಂದು ಹೇಳಲಾಗುತ್ತದೆ.