ಐಪಿಎಲ್ನಲ್ಲಿ ಮಿಂಚಿದ್ದ ರಿಂಕು ಸಿಂಗ್ ಟೀಂ ಇಂಡಿಯಾದಲ್ಲಿ ಅವಕಾಶ ಪಡೆದಿದ್ದರು. ಇದೀಗ T20 ತಂಡದಿಂದ ಹೊರಗುಳಿದಿರುವ ಅವರಿಗೆ, ಏಷ್ಯಾ ಕಪ್ ರೈಸಿಂಗ್ ಸ್ಟಾರ್ಸ್ ಟೂರ್ನಿ ಕಂಬ್ಯಾಕ್ಗೆ ಉತ್ತಮ ವೇದಿಕೆಯಾಗಿತ್ತು. ಆದರೆ, ಇಲ್ಲಿ ಅವರು ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದು, ಎರಡು ಪಂದ್ಯಗಳಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಇದರಿಂದಾಗಿ ಅಭಿಮಾನಿಗಳಿಗೆ ನಿರಾಸೆಯಾಗಿದ್ದು, ಭಾರತ ತಂಡಕ್ಕೆ ಮರಳುವ ಅವರ ಕನಸಿಗೆ ಹಿನ್ನಡೆಯಾಗಿದೆ. ಕಳೆದ ಕೆಲವು ವರ್ಷಗಳಿಂದ ಐಪಿಎಲ್ನಲ್ಲಿ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದಿರುವ ರಿಂಕು ಸಿಂಗ್, ಸಾಕಷ್ಟು ಜನಪ್ರಿಯತೆ ಗಳಿಸಿದ್ದಾರೆ. ಐಪಿಎಲ್ನಲ್ಲಿನ ಅದ್ಭುತ ಪ್ರದರ್ಶನವೇ ಅವರಿಗೆ ಟೀಂ ಇಂಡಿಯಾದಲ್ಲಿ ಅವಕಾಶ ತಂದುಕೊಟ್ಟಿತ್ತು.