ಇಂದು (ನವೆಂಬರ್ 22) ನಟಿ ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರು ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದು, ಕಾರ್ಯಕರ್ತೆಯರ ಪರವಾಗಿ ಸಿಎಂ ಡಿಕೆ ಶಿವಕುಮಾರ್ ಅವರಿಗೆ ಮನವಿಯನ್ನು ಮಾಡಿದ್ದಾರೆ. ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ತುರ್ತಾಗಿ ಪರಿಗಣಿಸುವಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಈ ಪತ್ರವನ್ನು ಅವರು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಗೌರವ ಧನ ಹೆಚ್ಚಳಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಹೋರಾಟಕ್ಕೆ ಕೆಲವಾರು ಸಂಘಟನೆಗಳು ಈಗಾಗಲೇ ಬೆಂಬಲ ಸೂಚಿಸಿವೆ. ನಿನ್ನೆ ನಟಿ ರಮ್ಯಾ ಅವರು ಸಹ ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಪೋಸ್ಟ್ ಹಂಚಿಕೊಂಡಿದ್ದರು.