2026ರ ರೈಸಿಂಗ್ ಸ್ಟಾರ್ಸ್ ಏಷ್ಯಾಕಪ್ನಲ್ಲಿ ಭಾರತ ಎ ತಂಡದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ. ನೇಪಾಳ ಮತ್ತು ಪಾಕಿಸ್ತಾನ ಎ ವಿರುದ್ಧದ ಪಂದ್ಯಗಳಲ್ಲಿ ಅವರು ದೊಡ್ಡ ಇನ್ನಿಂಗ್ಸ್ ಕಟ್ಟುವಲ್ಲಿ ಎಡವಿದ್ದಾರೆ. ಪಾಕಿಸ್ತಾನ ಎ ವಿರುದ್ಧದ ರನ್ ಚೇಸ್ನಲ್ಲಿ 11 ರನ್ಗಳಿಗೆ ವಿಕೆಟ್ ಒಪ್ಪಿಸಿ ತಂಡಕ್ಕೆ ನಿರಾಸೆ ಮೂಡಿಸಿದ್ದು, ಅವರ ವೈಫಲ್ಯವು ಅಭಿಮಾನಿಗಳಲ್ಲಿ ಚಿಂತೆ ಮೂಡಿಸಿದೆ. 2026ರ ರೈಸಿಂಗ್ ಸ್ಟಾರ್ಸ್ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಎ ತಂಡದ ಪರ ಆಡುತ್ತಿರುವ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಮೇಲೆ ಸಾಕಷ್ಟು ನಿರೀಕ್ಷೆಗಳಿದ್ದವು. ಆದರೆ ಟೂರ್ನಿಯಲ್ಲಿ ಅವರು ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ.