ಪ್ರಜ್ವಲ್ ಪಾಪದ ಹುಡುಗನಂತೆ, ಸಂತ್ರಸ್ತೆಯರ ಬಗ್ಗೆ ಕಾಳಜಿಯೇ ಇಲ್ಲ: ಕುಮಾರಸ್ವಾಮಿ ವಿರುದ್ಧ ಚಲುವರಾಯಸ್ವಾಮಿ ಕಿಡಿ. ಹಾಸನದ ಪೆನ್ಡ್ರೈವ್ ಪ್ರಕರಣ ಹಾಗೂ ಸ್ಟಿಂಗ್ ಆಪರೇಷನ್ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಸಚಿವ ಚಲುವರಾಯಸ್ವಾಮಿ ನಡುವಿನ ವಾಕ್ಸಮರ ಮತ್ತೆ ತೀವ್ರಗೊಂಡಿದೆ. ಸ್ಟಿಂಗ್ ವಿಚಾರವನ್ನು ಅನಗತ್ಯವಾಗಿ ಪ್ರಸ್ತಾಪಿಸುತ್ತಿರುವ ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ ಅವರ ಬಗ್ಗೆ ಸಹಾನುಭೂತಿ ತೋರುತ್ತಿದ್ದಾರೆ. ಆದರೆ, ಪ್ರಜ್ವಲ್ನಿಂದ ಅನ್ಯಾಯಕ್ಕೊಳಗಾದ ನೂರಾರು ಮಹಿಳೆಯರ ಬಗ್ಗೆ ಕಾಳಜಿ ತೋರುತ್ತಿಲ್ಲ ಎಂದು ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.