2023ರ ವಿಧಾನಸಭಾ ಚುನಾವಣೆಯಲ್ಲಿ ಬೊಮ್ಮನಹಳ್ಳಿ ಬಿಜೆಪಿ ಶಾಸಕ ಎಂ. ಸತೀಶ್ ರೆಡ್ಡಿ ಆಯ್ಕೆ ಪ್ರಶ್ನಿಸಿ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಉಮಾಪತಿ ಶ್ರೀನಿವಾಸ್ ಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಚುನಾವಣಾ ಅರ್ಜಿ ಸಲ್ಲಿಸುವ ಮೊದಲು ವೆಚ್ಚದ ಭದ್ರತಾ ಠೇವಣಿ ಪಾವತಿಸದಿರುವುದನ್ನು ಅರ್ಜಿದಾರರು ಸ್ಪಷ್ಟವಾಗಿ ಒಪ್ಪಿಕೊಂಡಿದ್ದಾರೆ. ಅಲ್ಲದೆ, ಮರುದಿನ ಠೇವಣಿ ಪಾವತಿಸಿದ್ದಾರೆ. ಅಂದು ಚುನಾವಣಾ ಫಲಿತಾಂಶ ಪ್ರಕಟವಾಗಿ 46ನೇ ದಿನವಾಗಿತ್ತು ಎಂದು ಪೀಠ ಹೇಳಿದೆ.