ಹುಲಿ ಸಾವು, ಕಾಡಾನೆ ದಂತ ಮಾಯ! ವಾರದಲ್ಲಿ ತನಿಖಾ ವರದಿ ಸಲ್ಲಿಸಿ: ರಾಮಲಿಂಗಾ ರೆಡ್ಡಿ ಖಡಕ್ ನಿರ್ದೇಶನ. ಬೆಂಗಳೂರು: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದಲ್ಲಿ ಹುಲಿ ಉರುಳಿಗೆ ಸಿಲುಕಿ ಮೃತಪಟ್ಟಿತ್ತು. ಕರಡಿಕಲ್ಲು ಗುಡ್ಡ ಪ್ರದೇಶದಲ್ಲಿ ಕಾಡಾನೆಯ ದಂತ ನಾಪತ್ತೆಯಾದ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ, ಅರಣ್ಯ ಅಧಿಕಾರಿಗಳ ಕರ್ತವ್ಯಲೋಪ ಪರಿಶೀಲಿಸಿ ವಾರದೊಳಗೆ ವಿವರವಾದ ವರದಿ ಸಲ್ಲಿಸುವಂತೆ ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಅವರು ಕಟ್ಟುನಿಟ್ಟಿನ.