Express Train: ಯಶವಂತಪುರ ಎಕ್ಸ್ಪ್ರೆಸ್ ರೈಲು ಸೇವೆ ವಿಸ್ತರಣೆ, 6 ರೈಲುಗಳ ಮಾರ್ಗ ಬದಲಾವಣೆ. ಬೆಂಗಳೂರು: ದಸರಾ ಮತ್ತು ದೀಪಾವಳಿ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು ನೈರುತ್ಯ ರೈಲ್ವೆಯು ಯಶವಂತಪುರ-ಶಿವಮೊಗ್ಗ ಟೌನ್-ಯಶವಂತಪುರ ನಡುವೆ ಸಂಚರಿಸುವ ರೈಲನ್ನು ತಾಳಗುಪ್ಪವರೆಗೆ ವಿಸ್ತರಣೆ ಮಾಡಲಾಗಿದೆ. ಈ ತಾತ್ಕಾಲಿಕ ವಿಸ್ತರಣಾ ಸೇವೆಯು ಅಕ್ಟೋಬರ್ 18ರಿಂದ ನವೆಂಬರ್ 12ರ ಜಾರಿಯಲ್ಲಿರಲಿದೆ. ಇದರೊಂದಿಗೆ ಕೆಲವು ರೈಲು ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜಧಾನಿಯಿಂದ ಶಿವಮೊಗ್ಗಕ್ಕೆ ವಾರಕ್ಕೆ.