ಹೈದರಾಬಾದ್: ಹೈದರಾಬಾದ್ ಮಹಾನಗರ ಪಾಲಿಕೆಯ (GHMC) ಮಾಜಿ ಉಪಮೇಯರ್ ಬಾಬಾ ಫಸಿಯುದ್ದೀನ್ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿದ ಆರೋಪದ ಮೇಲೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ದಾಖಲಾದ. ಪ್ರಕರಣ ದಾಖಲಾದ ಕೆಲವೇ ಗಂಟೆಗಳಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಹತ್ಯೆಯ ಸಂಚನ್ನು ವಿಫಲಗೊಳಿಸಿದ್ದಾರೆ. ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದು, ಆತನಿಗಾಗಿ ಹುಡುಕಾಟ ಮುಂದುವರಿದಿದೆ.ಬಂಧಿತರನ್ನು ಇಮ್ರಾನ್ ಖಾನ್ (33), ದೇವರ ರಾಜ (56), ಫಯಾಜ್ ಖಾನ್ (38), ಮೊಹಮ್ಮದ್ ಕಾಶಿಫ್ ಮಿಸ್ಬಾ (26) ಮತ್ತು ಶೇಕ್ ನವಾಜ್ (32) ಎಂದು ಗುರುತಿಸಲಾಗಿದೆ. ಇವರಲ್ಲಿ ಇಮ್ರಾನ್ ಖಾನ್ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದರೆ, ದೇವರ ರಾಜ ರಿಯಲ್ ಎಸ್ಟೇಟ್ ಮಧ್ಯವರ್ತಿಯಾಗಿದ್ದಾರೆ.